Vasudhendra
Tejo Tungabhadra: Tributaries of Time
- Author Name:
Maithreyi Karnoor +1
-
Book Type:

- Description: Tejo Tungabhadra narrates the story of two rivers on different continents whose souls are interconnected through history. On the banks of the river Tejo in Lisbon, Bella, a young Jewish refugee, and her family face daily threats to their lives and dignity from a deeply antisemitic society. Gabriel, her lover, sails to India with General Albuquerque's fleet, seeking wealth and a secure future. Meanwhile, on the banks of the Tungabhadra in the Vijayanagara Empire, the young couple Hampamma and Keshava find themselves caught in a storm of religious violence and the harsh cycle of tradition. The two stories come together in Goa with the power and energy of meeting rivers. Set in the late 15th and early 16th centuries, Tejo Tungabhadra is a grand saga of love, ambition, greed, and a lively passion for life amid the turbulent waves of history.
Tejo Tungabhadra: Tributaries of Time
Maithreyi Karnoor
kothigalu
- Author Name:
Vasudhendra
-
Book Type:

- Description: ವಸುಧೇಂದ್ರರ ಆರಂಭದ ಸುಲಲಿತ ಪ್ರಬಂಧಗಳ ಗುಚ್ಛ.
kothigalu
Vasudhendra
Aidu Paise VaradakshiNe
- Author Name:
Vasudhendra
-
Book Type:

- Description: ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’. ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ. ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
Aidu Paise VaradakshiNe
Vasudhendra
Everest
- Author Name:
Jon Krakauers +1
-
Book Type:

- Description: ಜಾನ್ ಕ್ರಾಕೌರ್ ಅಮೇರಿಕಾದ ಜನಪ್ರಿಯ ಲೇಖಕ ಮತ್ತು ಪರ್ವತರೋಹಿ. ಈತನ ಕೃತಿಯನ್ನು ಕನ್ನಡಕ್ಕೆ ತಂದವರು ವಸುಧೇಂದ್ರ. ’ಎವರೆಸ್ಟ್’ ಕೃತಿಯು ಪರ್ವತಾರೋಹಣದ ದುರಂತ ಕತೆಯಾಗಿದೆ. ಪರ್ವತಾರೋಹಣ ಮಾಡುವಾಗ ನಡೆದ ಘಟನೆಗಳು ಲೇಖಕರ ಬದುಕಿನ ಧೈರ್ಯವನ್ನು ನಿರಂತರವಾಗಿ ಕೆಣಕಿದ ಕಥಾನಕ ಅಂಶಗಳು ಈ ಕೃತಿಯಲ್ಲಿದೆ. ಲೇಖಕರಿಗೆ ಎವರೆಸ್ಟ್ ಹತ್ತುವ ಬಯಕೆಯು ಸಂಕೀರ್ಣವಾದ ಸಂಗತಿ, ಮತ್ತು ಅಪಾಯಕಾರಿ ವಿಸ್ಮಯ, ವಿಷಯಗಳು ತಿಳಿದಿದ್ದರೂ ಎವರೆಸ್ಟ್ ಹತ್ತಲೇಬೇಕೆನಿಸಿದ ಲೇಖಕರ ತೊಳಲಾಟದ ಪರಿಯನ್ನೂ, ಕಹಿ ಸತ್ಯದ ಮುಖಗಳನ್ನು ಒಂದೆಡೆ ಕೃತಿ ತೆರೆದಿಡುತ್ತದೆ.
Everest
Jon Krakauers
Mohanaswamy
- Author Name:
Vasudhendra
- Rating:
-
Book Type:

- Description: ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Mohanaswamy
Vasudhendra
Vishama Bhinnaraashi
- Author Name:
Vasudhendra
- Rating:
-
Book Type:

- Description: ಪ್ರಮುಖ ಕತೆಗಾರ ವಸುಧೇಂದ್ರ ಅವರು ಬರೆದಿರುವ ಅಮೃತ ಸೊಪ್ಪು, ವಾಹಿನಿ, ಡೆವಿಲ್ ಡಾಗ್, ವಿಷಮ ಭಿನ್ನರಾಶಿ, ನಿಯಮ ಬಾಹಿರ, ಸೈಕಲ್ ಸವಾರಿ, ಚತುರ್ಮುಖ, ಆಡಬಾರದ ಮಾತುಗಳು ಕಾಡುವಾಗ- ಹೀಗೆ ಎಂಟು ಕಥೆಗಳನ್ನು ಈ ಕೃತಿಯು ಒಳಗೊಂಡಿದೆ. ತಂದೆ ತಾಯಿ, ಸಂಸ್ಕಾರವನ್ನೂ ಮರೆತು ತಂತ್ರಜ್ಞಾನ ಜಗತ್ತಿನಲ್ಲಿ ಹುದ್ದೆಯಲ್ಲಿ ಮೇಲೇರಲು ಹಪಾಹಪಿಸುವ ಯುವ ಜನಾಂಗವನ್ನು ಈ ಕೃತಿಯಲ್ಲಿ ಹಿಡಿದಿಟ್ಟಿದ್ದಾರೆ.
Vishama Bhinnaraashi
Vasudhendra
Nammamma Andre Nangishta
- Author Name:
Vasudhendra
- Rating:
-
Book Type:

- Description: ಕಥೆಗಾರ, ಬರಹಗಾರ ವಸುಧೇಂದ್ರ ಅವರು ಬರೆದ ‘ನಮ್ಮಮ್ಮ ಅಂದ್ರೆ ನಂಗಿಷ್ಟ’ ಕೃತಿ 2006ರಲ್ಲಿ ಮೊದಲ ಮುದ್ರಣಗೊಂಡು 2019ರಲ್ಲಿ ಹತ್ತೊಂಬತ್ತನೇ ಆವೃತ್ತಿ ಕಂಡಿದೆ. ಸರಳ ಪ್ರಬಂಧ ಸಂಕಲನಗಳಲ್ಲಿ ಲೇಖಕರು ತಾಯಿಯ ಮೊದಲ ಕೂಗಿನಿಂದ ನಡೆದ ಹೃದಯಸ್ಪರ್ಶಿ ಘಟನೆಗಳನ್ನು ವಿವರಿಸಿದ್ದಾರೆ. ಹುಟ್ಟಿದ ಕ್ಷಣದಿಂದ ಮಗು ತಾಯಿಯನ್ನು ಅಳಿಸುವಷ್ಟು ದೊಡ್ಡದಾದ ಸಮಯಕ್ಕೆ. ಪ್ಯಾಂಟಿನಲ್ಲಿ 'ಗಲೀಜು' ಮಾಡಿ ಎಲ್ಲರಿಗೂ ಅಸ್ಪೃಶ್ಯಳಾಗುವಂತೆ ಮಾಡುವ ತಾಯಿ, ಬಂಗಾರದಂತಹ ಸ್ಟೀಲ್ ಪಾತ್ರೆಗಳನ್ನು ಪ್ರೀತಿಸುವ ತಾಯಿ, ಭಿಕ್ಷುಕ ಮಗನ ಮುಂದೆ ಕುಳಿತು "ನೀನು ನಂಗೆ ಬೈದುಬಿಟ್ಟಿ" ಎಂದು ಮುಗ್ಧವಾಗಿ ಅಳುವ ತಾಯಿ. ಬೆಂಗಳೂರಿನ ಅಜ್ಞಾತ ಬೀದಿಯಲ್ಲಿ ಕಳೆದುಹೋಗುತ್ತಾಳೆ, ಶೌಚಕ್ಕೆ ಹೋದಷ್ಟೇ ಸಲೀಸಾಗಿ ಇಹಲೋಕ ತ್ಯಜಿಸುವ ತಾಯಿ, ತನಗೆ ಗೊತ್ತಿರದ ಉತ್ಕಟ ಪ್ರೀತಿ ಹೊಂದಿರುವ ತಾಯಿ. ಓದುಗನ ಭಾವುಕ ಜಗತ್ತಿಗೆ ನವಿರಾಗಿ ತಿಳಿಸುವ ಲೇಖಕರ ಈ ಕೃತಿ ಹಲವು ಬಗೆಯ ತಾಯಂದಿರ ಮನಸುಗಳನ್ನು ತಿಳಿಸುತ್ತದೆ. ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ
Nammamma Andre Nangishta
Vasudhendra
Yugaadi
- Author Name:
Vasudhendra
-
Book Type:

- Description: ವಸುಧೇಂದ್ರರ ಈ ಕಥಾಸಂಕಲನಕ್ಕೆ ಹಲವು ಪ್ರಶಸ್ತಿಗಳು ಸಂದಿವೆ. ಮುಖ್ಯವಾಗಿ ಡಾ. ಯು ಆರ್ ಅನಂತಮೂರ್ತಿ ಪ್ರಶಸ್ತಿ ಹಾಗೂ ವರ್ಧಮಾನ ಉದಯೋನ್ಮುಖ ಪ್ರಶಸ್ತಿಗಳು ಈ ಸಂಕಲನಕ್ಕೆ ದಕ್ಕಿವೆ.
Yugaadi
Vasudhendra
Tejo Tungabhadra
- Author Name:
Vasudhendra
- Rating:
-
Book Type:

- Description: 15-16 ನೆಯ ಶತಮಾಮನದ ಲಿಸ್ಬನ್, ವಿಜಯನಗರ ಮತ್ತು ಗೋವಾ ನಗರಗಳ ಸಾಮಾಜಿಕ ಮತ್ತು ರಾಜಕೀಯ ಜೀವನವನ್ನು ಆಧರಿಸಿ ಬರೆದ ಜನಸಾಮಾನ್ಯರ ಕಾದಂಬರಿ. ನಿಮ್ಮ ಹೊಸ ಕಾದಂಬರಿಯನ್ನು ಓದಿ ಮೂಕ ವಿಸ್ಮಿತನಾಗಿದ್ದೇನೆ. ಇಂತಹ ಶ್ರೇಷ್ಠ ಕೃತಿಯನ್ನು ಕನ್ನಡಿಗರಿಗೆ ಕೊಟ್ಟಿರುವ ನಿಮಗೆ ಹಾರ್ದಿಕ ಅಭಿನಂದನೆಗಳು. – ಡಾ. ಸಿ ಎನ್ ರಾಮಚಂದ್ರನ್
Tejo Tungabhadra
Vasudhendra
Hampi Express
- Author Name:
Vasudhendra
- Rating:
-
Book Type:

- Description: ಹಂಪಿ ಎಕ್ಸ್‌ಪ್ರೆಸ್ (ಕನ್ನಡ)-ವಸುಧೇಂದ್ರ ಅವರ ಕನ್ನಡದಲ್ಲಿ ಸಣ್ಣ ಕಥೆಗಳ ಸಂಗ್ರಹವನ್ನು ಚಂದಾ ಪುಸ್ತಕದಿಂದ ಪ್ರಕಟಿಸಲಾಗಿದೆ. ಈ ಕೃತಿಯಲ್ಲಿ ವಾಸ್ತವಕ್ಕೆ ಹತ್ತಿರವಾದ ಮತ್ತು ಸಮಕಾಲೀನ ತಲ್ಲಣಗಳನ್ನು ಎದುರಿಸುವ ಹಲವು ವಿಷಯಗಳನ್ನು ಕಥೆಗಾರ ವಸುಧೇಂದ್ರ ಓದುಗರಿಗೆ ನೀಡಿದ್ದಾರೆ. ಈ ಕೃತಿಗೆ ಮಾಸ್ತಿ ಕಥಾ ಪ್ರಶಸ್ತಿ, ಬೇಂದ್ರೆ ಪುಸ್ತಕ ಬಹುಮಾನ ಮತ್ತು ವಾಸುದೇವ ಭೂಪಾಲಂ ಪ್ರಶಸ್ತಿ ಲಭಿಸಿದೆ.
Hampi Express
Vasudhendra
Harichitta Satya
- Author Name:
Vasudhendra
- Rating:
-
Book Type:

- Description: ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Harichitta Satya
Vasudhendra
Kotigalu
- Author Name:
Vasudhendra
-
Book Type:

- Description: ವಸುಧೇಂದ್ರ ಅವರು ಬರೆದ ಸುಲಲಿತ ಪ್ರಬಂಧಗಳ ಸಂಕಲನ-ಕೋತಿಗಳು. ಕತೆ-ಕಾದಂಬರಿಗಳನ್ನು ಪರಿಣಾಮಕಾರಿಯಾಗಿ ಬರೆಯುವ ವಸುಧೇಂದ್ರ ಅವರು ಕೋತಿಗಳು ಸಂಕಲನದಲ್ಲಿ ತಾವು ಒಬ್ಬ ಉತ್ತಮ ಪ್ರಬಂಧಕಾರರೂ ಎಂಬುದನ್ನು ನಿರೂಪಿಸಿದ್ದಾರೆ. ವಿಷಯ ವಸ್ತುವಿನ ಆಯ್ಕೆ, ಅದು ನಂತರ ಪಡೆಯುತ್ತಾ ಹೋಗುವ ರೂಪು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
Kotigalu
Vasudhendra
Mithuna
- Author Name:
Vasudhendra
-
Book Type:

- Description: ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.
Mithuna
Vasudhendra
Varnamaya
- Author Name:
Vasudhendra
-
Book Type:

- Description: ವಸುಧೇಂದ್ರರ ಎರಡು ನೀಳ್ ಪ್ರಬಂಧಗಳ ಜೊತೆಗೆ, ಹಲವು ಸ್ವಾರಸ್ಯಕರ ಸುಲಲಿತ ಪ್ರಬಂಧಗಳು. ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ. ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
Varnamaya
Vasudhendra
Maneeshe
- Author Name:
Vasudhendra
-
Book Type:

- Description: ವಸುಧೇಂದ್ರರ ಮೊದಲ ಕಥಾಸಂಕಲನ. ತಮ್ಮ ಬಳ್ಳಾರಿ ಜಿಲ್ಲೆಯ ಬ್ರಾಹ್ಮಣ ಕುಟುಂಬಗಳ ದಟ್ಟ ವಿವರಗಳುಳ್ಳ ಕತೆಗಳು ಇಲ್ಲಿವೆ. ವಿಶೇಷವಾಗಿ ’ಹುಲಿಗೆವ್ವ’ ಎನ್ನುವ ವಿಭಿನ್ನ ಜಾಡಿನ ಕತೆ ಈ ಸಂಕಲನದಲ್ಲಿ ಕಾಣಿಸಿಕೊಂಡಿದೆ.