Dweepava Bayasi
(1)
₹
320
₹ 272 (15% off)
Unavailable
Ships within 48 Hours
Free Shipping in India on orders above Rs. 1100
ದ್ವೀಪವ ಬಯಸಿ ಎಂಬುದು ಲೇಖಕ ಎಂ.ಆರ್. ದತ್ತಾತ್ರಿ ಅವರು ಬರೆದ ಕಾದಂಬರಿ. ಸೂರ್ಯನಾರಾಯಣ ಚಡಗ ಪ್ರಶಸ್ತಿ ಹಾಗೂ ಅಮ್ಮ ಪ್ರಶಸ್ತಿ ಪಡೆದ ಕೃತಿ ಇದು. ಸಂಬಂಧಗಳ ಗಾಢತೆಯನ್ನು ಒಳಗೊಂಡ ಭಾರತದಿಂದ ಅಮೆರಿಕಕ್ಕೆ ಹೋದ ವ್ಯಕ್ತಿಯೊಬ್ಬ ಅಲ್ಲಿ ಸಂಬಂಧಗಳನ್ನು ಹುಡುಕ ಹೋಗುತ್ತಾನೆ. ಆದರೆ, ಅವನಿಗೆ ನಿರಾಶೆ ಕಾದಿರುತ್ತದೆ. ಆಧುನಿಕ ಜೀವನ ಶೈಲಿ, ಸಂಬಂಧಗಳಿಗೆ ಬೆಲೆ ಇಲ್ಲದ ಸಮಾಜ, ಈ ಮಧ್ಯೆ ದ್ವಂದ್ವದಲ್ಲಿ ಸಿಲುಕುವ ಪಾತ್ರದ ಗೊಂದಲಗಳು ಈ ಕಾದಂಬರಿಯ ವಸ್ತು. ಚಿಕ್ಕಮಗಳೂರು ಸೀಮೆಯ ಗೊಲ್ಲರಹಳ್ಳಿಯಲ್ಲಿ ಹುಟ್ಟಿ ಬೆಳೆದು ದೊಡ್ಡವನಾಗಿದ್ದ ಈ ವ್ಯಕ್ತಿ ಅಮೆರಿಕದಲ್ಲಿ ಬದುಕು ಕಂಡುಕೊಳ್ಳಲು ಹೆಣಗುವ ’ಜೋಯಿಸರ ಹುಡುಗ’ ನ ಕಥೆ ಇದು.
Read moreAbout the Book
ದ್ವೀಪವ ಬಯಸಿ ಎಂಬುದು ಲೇಖಕ ಎಂ.ಆರ್. ದತ್ತಾತ್ರಿ ಅವರು ಬರೆದ ಕಾದಂಬರಿ. ಸೂರ್ಯನಾರಾಯಣ ಚಡಗ ಪ್ರಶಸ್ತಿ ಹಾಗೂ ಅಮ್ಮ ಪ್ರಶಸ್ತಿ ಪಡೆದ ಕೃತಿ ಇದು. ಸಂಬಂಧಗಳ ಗಾಢತೆಯನ್ನು ಒಳಗೊಂಡ ಭಾರತದಿಂದ ಅಮೆರಿಕಕ್ಕೆ ಹೋದ ವ್ಯಕ್ತಿಯೊಬ್ಬ ಅಲ್ಲಿ ಸಂಬಂಧಗಳನ್ನು ಹುಡುಕ ಹೋಗುತ್ತಾನೆ. ಆದರೆ, ಅವನಿಗೆ ನಿರಾಶೆ ಕಾದಿರುತ್ತದೆ. ಆಧುನಿಕ ಜೀವನ ಶೈಲಿ, ಸಂಬಂಧಗಳಿಗೆ ಬೆಲೆ ಇಲ್ಲದ ಸಮಾಜ, ಈ ಮಧ್ಯೆ ದ್ವಂದ್ವದಲ್ಲಿ ಸಿಲುಕುವ ಪಾತ್ರದ ಗೊಂದಲಗಳು ಈ ಕಾದಂಬರಿಯ ವಸ್ತು. ಚಿಕ್ಕಮಗಳೂರು ಸೀಮೆಯ ಗೊಲ್ಲರಹಳ್ಳಿಯಲ್ಲಿ ಹುಟ್ಟಿ ಬೆಳೆದು ದೊಡ್ಡವನಾಗಿದ್ದ ಈ ವ್ಯಕ್ತಿ ಅಮೆರಿಕದಲ್ಲಿ ಬದುಕು ಕಂಡುಕೊಳ್ಳಲು ಹೆಣಗುವ ’ಜೋಯಿಸರ ಹುಡುಗ’ ನ ಕಥೆ ಇದು.
Book Details
-
ISBN9788196323868
-
Pages254
-
Avg Reading Time8 hrs
-
Age18+ yrs
-
Country of OriginIndia
Recommended For You
Taarabhaayiya Patra
- Author Name:
M R Dattathri
- Book Type:

- Description:
ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Rushyashrunga
- Author Name:
Harisha Hagalawadi
- Book Type:

- Description:
ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
Kotigalu
- Author Name:
Vasudhendra
- Book Type:

- Description:
ವಸುಧೇಂದ್ರ ಅವರು ಬರೆದ ಸುಲಲಿತ ಪ್ರಬಂಧಗಳ ಸಂಕಲನ-ಕೋತಿಗಳು. ಕತೆ-ಕಾದಂಬರಿಗಳನ್ನು ಪರಿಣಾಮಕಾರಿಯಾಗಿ ಬರೆಯುವ ವಸುಧೇಂದ್ರ ಅವರು ಕೋತಿಗಳು ಸಂಕಲನದಲ್ಲಿ ತಾವು ಒಬ್ಬ ಉತ್ತಮ ಪ್ರಬಂಧಕಾರರೂ ಎಂಬುದನ್ನು ನಿರೂಪಿಸಿದ್ದಾರೆ. ವಿಷಯ ವಸ್ತುವಿನ ಆಯ್ಕೆ, ಅದು ನಂತರ ಪಡೆಯುತ್ತಾ ಹೋಗುವ ರೂಪು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
Maneeshe
- Author Name:
Vasudhendra
- Book Type:

- Description:
ವಸುಧೇಂದ್ರರ ಮೊದಲ ಕಥಾಸಂಕಲನ. ತಮ್ಮ ಬಳ್ಳಾರಿ ಜಿಲ್ಲೆಯ ಬ್ರಾಹ್ಮಣ ಕುಟುಂಬಗಳ ದಟ್ಟ ವಿವರಗಳುಳ್ಳ ಕತೆಗಳು ಇಲ್ಲಿವೆ. ವಿಶೇಷವಾಗಿ ’ಹುಲಿಗೆವ್ವ’ ಎನ್ನುವ ವಿಭಿನ್ನ ಜಾಡಿನ ಕತೆ ಈ ಸಂಕಲನದಲ್ಲಿ ಕಾಣಿಸಿಕೊಂಡಿದೆ.
Saavu
- Author Name:
Supreeth K N
- Book Type:

- Description:
Novel based on death. ಇಂದ್ರಿಯಗಳಿಂದಾಚೆ ಯೋಚಿಸದ ಹೊರತು; 'ನಾನು ಯಾರು?' ಎಂದು ಅರಿವಾಗುವುದಿಲ್ಲ. 'ನಾನು ಯಾರು?' ಎಂದು ಅರಿವಾಗದ ಹೊರತು, 'ಸಾವು' ಅರ್ಥವಾಗುವುದಿಲ್ಲ. 'ನೀನು ಯಾರು?' ಎನ್ನುವ ಅರಿವು ನಿನಗಿದೆಯಾ?
Varnamaya
- Author Name:
Vasudhendra
- Book Type:

- Description:
ವಸುಧೇಂದ್ರರ ಎರಡು ನೀಳ್ ಪ್ರಬಂಧಗಳ ಜೊತೆಗೆ, ಹಲವು ಸ್ವಾರಸ್ಯಕರ ಸುಲಲಿತ ಪ್ರಬಂಧಗಳು. ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ. ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
Mithuna
- Author Name:
Vasudhendra
- Book Type:

- Description:
ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.
Hena Horuvavana Vrutthantha
- Author Name:
Cyrus Mistry +1
- Book Type:

- Description:
ಮೂಲ ಲೇಖಕರು : ಸೈರಸ್ ಮಿಸ್ತ್ರಿ ಕನ್ನಡಕ್ಕೆ : ಬಿ.ಆರ್.ಜಯರಾಮರಾಜೇ ಅರಸ್ ನಾಟಕ, ಪತ್ರಿಕೋದ್ಯಮ ಕ್ಷೇತ್ರದ ನಂಟಿನ ಜೊತೆಗೆ ಸಣ್ಣ ಕತೆಗಾರನಾಗಿ ವ್ಯಾಪಕ ಸಾಹಿತ್ಯ ಕೃಷಿ ಮಾಡಿರುವ ಸೈರಸ್ ಮಿಸ್ತ್ರಿ ಅವರ ‘ಕ್ರಾನಿಕಲ್ ಆಫ್ ಎ ಕಾರ್ಪ್ಸ್ ಬೇರರ್’ ಇಂಗ್ಲಿಷ್ ಕಾದಂಬರಿಯ ಅನುವಾದ ಈ ಹೊತ್ತಿಗೆ. 2013ನೇ ಸಾಲಿನಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಈ ಕೃತಿಯನ್ನು ಬಿ.ಆರ್.ಜಯರಾಮರಾಜೇ ಅರಸ್ ಅನುವಾದಿಸಿದ್ದಾರೆ. ಕಾದಂಬರಿಯ ಪುಟ ತಿರುವಿದಂತೆ ಕಥೆಯು ಬಾಂಬೆಯಲ್ಲಿ 1942ನೇ ಇಸವಿಯ ವರ್ತಮಾನ ಕಾಲದಿಂದ ಆರಂಭವಾಗಿ ಭೂತಕಾಲದಲ್ಲಿ ಸಾಗುತ್ತಾ ಅಪೂರ್ಣ ಭವಿಷ್ಯ ಬಿಚ್ಚಿಕೊಳ್ಳುತ್ತಾ ಮುನ್ನಡೆದಿದೆ. ಇಲ್ಲಿ ‘ಎಲ್ಚಿ’ (ಫಿರೋಜ್ ಎಲ್ಚಿದಾನ) ಕಥಾನಾಯಕ. ಪಾರ್ಸಿ ಉಪಜಾತಿಗೆ ಸೇರಿದ ಅಸ್ಪೃಶ್ಯರಾದ ಹೆಣಹೊರುವವರ ಬದುಕಿನ ವೃತ್ತಾಂತ ಇಲ್ಲಿದೆ. ಫಿರೋಜ್ ಸಮಾಜದ ಪ್ರಬಲ ವರ್ಗಕ್ಕೆ ಸೇರಿದ ಪುರೋಹಿತರೊಬ್ಬನ ಮಗ. ‘ಖಾಂಧಿಯಾ’ (ಹೆಣ ಹೊರುವವರು) ಜಾತಿಗೆ ಸೇರಿದ ಸೆಪಿಡೆಹ್ (ಸೆಪ್ಪಿ) ಎಂಬುವವಳನ್ನು ಪ್ರೀತಿಸುತ್ತಾನೆ. ಮಗಳನ್ನು ಮದುವೆಯಾಗಬೇಕಾದರೆ ಹೆಣ ಹೊರುವ ವೃತ್ತಿ ಸ್ವೀಕರಿಸಿ, ತಮ್ಮ ಜೊತೆಯೇ ಬದುಕಬೇಕು ಎನ್ನುವ ಸೆಪ್ಪಿ ತಂದೆಯ ಷರತ್ತಿಗೆ ಒಪ್ಪಿ ಆಕೆಯನ್ನು ಮದುವೆಯಾಗುತ್ತಾನೆ. ಇದಕ್ಕಾಗಿ ತಂದೆ, ತಾಯಿ, ಸಮುದಾಯವನ್ನೂ ತೊರೆದು ಬರುತ್ತಾನೆ. ಮಗಳ ಜನನದ ಸಂದರ್ಭದಲ್ಲಿ ಸೆಪ್ಪಿ ನಿಧನ, ಎಲ್ಚಿ ಬದುಕಿಗೆ ತಿರುವಾಗುತ್ತದೆ. ಆತ, ಈ ನೋವಿನಲ್ಲೂ, ತುಳಿತಕ್ಕೊಳಗಾಗುತ್ತಿರುವ ಖಾಂಧಿಯಾ ಜನರ ಬದುಕಿನಲ್ಲಿ ಬದಲಾವಣೆ ತರುವತ್ತ ಪಾರ್ಸಿ ಪಂಚಾಯತ್ ವಿರುದ್ಧ ದಂಗೆಯನ್ನೂ ಆರಂಭಿಸುತ್ತಾನೆ. ದ್ವಿತೀಯಾರ್ಧದಲ್ಲಿ ಕಥೆಯ ಈ ನಿರೂಪಣೆ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳಿಗೆ ಸಮಾನಾಂತರವಾಗಿ ಸಾಗುತ್ತದೆ. ಉಸಿರು ಬಿಗಿಹಿಡಿದು ಕಥೆಯನ್ನು ಓದುವಂತೆ ಪ್ರೇರೇಪಿಸುತ್ತದೆ. ಪಾರ್ಸಿ ಸಂಸ್ಕೃತಿಯು ಕೃತಿಯುದ್ದಕ್ಕೂ ಉಸಿರಾಡಿದೆ. ಕನ್ನಡ ಸಾಹಿತ್ಯಕ್ಕೆ ಹೊಸತನ್ನು ಸೇರಿಸುವಲ್ಲಿ ಈ ಕೃತಿ ಯಶಸ್ವಿಯಾಗಿದೆ.
Amrapali
- Author Name:
Gayathriraj
- Book Type:

- Description:
ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Antariya ondu dina
- Author Name:
Prabha Sudhagade
- Book Type:

- Description:
ನಿಮಗೆ ಯಾವಾಗಲಾದರೂ ನಿಮ್ಮ ದಿನಚರಿ ಬೇಸರವಾಗಿದೆಯಾ? ಇಲ್ಲೊಬ್ಬಳು ಅಂತರಿ ಎನ್ನುವ ಇರುವೆಗೆ ಕೂಡ ದಿನಚರಿ ಬೇಸರವಾಗಿದೆ. ಆಗ ಅಂತರಿ ಏನು ಸಾಹಸ ಮಾಡಿದಳು ಎಂದು ತಿಳಿದುಕೊಳ್ಳಲು ಕಥೆ ಓದಿ. ಈ ಸುಂದರ ಕಥೆಯಲ್ಲಿ ಬರಿ ಅಂತರಿಯ ಸಾಹಸವಷ್ಟೇ ಅಲ್ಲದೆ ಅದರ ಜೊತೆಗೆ ವಿವಿಧ ಕೀಟಗಳ ಗೂಡುಗಳನ್ನು ಕೂಡ ಪರಿಚಯಿಸಲಾಗಿದೆ. With its blend of adventure and learning, it’s a perfect read for young minds—and an excellent addition to any school classroom or library!
Aidu Paise VaradakshiNe
- Author Name:
Vasudhendra
- Book Type:

- Description:
ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’. ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ. ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
Yugaadi
- Author Name:
Vasudhendra
- Book Type:

- Description:
ವಸುಧೇಂದ್ರರ ಈ ಕಥಾಸಂಕಲನಕ್ಕೆ ಹಲವು ಪ್ರಶಸ್ತಿಗಳು ಸಂದಿವೆ. ಮುಖ್ಯವಾಗಿ ಡಾ. ಯು ಆರ್ ಅನಂತಮೂರ್ತಿ ಪ್ರಶಸ್ತಿ ಹಾಗೂ ವರ್ಧಮಾನ ಉದಯೋನ್ಮುಖ ಪ್ರಶಸ್ತಿಗಳು ಈ ಸಂಕಲನಕ್ಕೆ ದಕ್ಕಿವೆ.
kothigalu
- Author Name:
Vasudhendra
- Book Type:

- Description:
ವಸುಧೇಂದ್ರರ ಆರಂಭದ ಸುಲಲಿತ ಪ್ರಬಂಧಗಳ ಗುಚ್ಛ.
Begudi
- Author Name:
Kiran Nagarkar +1
- Book Type:

- Description:
Kannada Translation of Award winning book Cuckold by Kiran Nagarkar
Dikku
- Author Name:
Devidasa Kadam +1
- Book Type:

- Description:
The novel Dika, which means "direction" in Konkani, tells the story of a farming family from the lower middle class. It is set in the North Kanara district of Karnataka and offers a vivid portrayal of the socio-cultural life of the region's inhabitants. The plot follows Deepak and his family as they struggle to adapt to a new way of life in their village after the sudden death of Deepak's father, a policeman. Along the way, they encounter various challenges, including problematic villagers, conniving relatives, and blind faith. When Deepak's sister falls in love with a Muslim boy, he must confront societal norms and convince his mother to accept their relationship. Ultimately, Deepak leads his family to a new and free existence, breaking free from the constraints imposed on them by society. This is best exemplified in the novel's closing scene, where Deepak witnesses a lone crow moving eastward, away from its flock, in a new direction.
Mahalinolage
- Author Name:
Rama Mehra +1
- Book Type:

- Description:
ಸಾಂಪ್ರದಾಯಿಕ ಜಗತ್ತಿನಲ್ಲಿ ತನ್ನ ಅಸ್ತಿತ್ವವನ್ನು ಉಳಿಸಲೋಸುಗ ಹೋರಾಟ ನಡೆಸಿದ ಸ್ವತಂತ್ರ ಮನೋಭಾವದ ಯುವತಿಯೋರ್ವಳ ಒಂದು ಅಪೂರ್ವ ಚಿತ್ರಣ ಮಹಲಿನೊಳಗೆ (ಇನ್ ಸೈಡ್ ದ ಹವೇಲಿ) ಕಾದಂಬರಿಯಲ್ಲಿದೆ. ಒಳ್ಳೆಯ ಶಿಕ್ಷಣ ಪಡೆದ ಮುಂಬೈಯ ಉಲ್ಲಾಸದ ಹುಡುಗಿ ಗೀತಾ ಸಂಪ್ರದಾಯಸ್ತ ಕುಟುಂಬಕ್ಕೆ ಮದುವೆಯಾಗಿ ಹೋಗಿ ಬಳಿಕ ಇದ್ದಕ್ಕಿದ್ದಂತೆ ಗಂಡನ ಮಹಲಿನಲ್ಲಿ ಪರದೆಯ ಹಿಂದೆ ಜೀವನ ನಡೆಸುತ್ತಾಳೆ. ನಿರ್ಬಂಧ ಹಾಗೂ ಇನ್ನಿತರ ಕಟ್ಟುಪಾಡುಗಳಿಗೆ ಒಳಗಾಗಿ ಸ್ವಾತಂತ್ರ್ಯ ಹಾಗೂ ಪುರೋಗಾಮಿ ಚಿಂತನೆಗಳನ್ನು ಹತ್ತಿಕ್ಕಬೇಕಾಗಿ ಬಂದು, ತಾನು ನಂಬಿದ ಆಧುನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಗೀತಾಳ ಹೋರಾಟ ಚಿತ್ರಣ ಇಲ್ಲಿದೆ.
Bhoomi
- Author Name:
Asha Bage
- Book Type:

- Description:
ವ್ಯಕ್ತಿಗಳಿಗೆ ಏಕಕಾಲಕ್ಕೆ ವ್ಯಕ್ತಿತ್ವ ಮತ್ತು ಚೈತನ್ಯತತ್ವದ ರೂಪ ನೀಡುವುದು ಆಶಾ ಬಗೆ ಅವರ ಕಥಾಸೃಷ್ಟಿಯ ಒಂದು ಮಹತ್ವದ ವೈಶಿಷ್ಟ್ಯ, ಬದುಕಿನ ಬಗೆಗಿನ ಶ್ರದ್ಧೆಯನ್ನು ಬಲಿಷ್ಠಗೊಳಿಸುವ ಮತ್ತು ಮನುಷ್ಯ ಜೀವನದಲ್ಲಿಯ ಸೌಂದರ್ಯದ ದರ್ಶನ ಮಾಡಿಸುವಂಥ ಬರವಣಿಗೆಯನ್ನು ಅವರ ಕಥೆ- ಕಾದಂಬರಿಗಳಲ್ಲಿ ಕಾಣಬಹುದು. ಆಶಾ ಬಗೆ ಕಥೆಗಾರ್ತಿಯಾಗಿ, ಕಾದಂಬರಿಗಾರ್ತಿಯಾಗಿ ಮರಾಠಿ ಕಥಾ ಪ್ರಪಂಚದಲ್ಲಿ ಅಗ್ರಗಣ್ಯ ಸ್ಥಾನವನ್ನು ಪಡೆದವರು. 'ಮಾರವಾ', 'ದರ್ಪಣ' ದಂತಹ ಕಥಾ- ಸಂಗ್ರಹಗಳು, 'ಭೂಮಿ', 'ಸೇತು', 'ಮುದ್ರಾ' ದಂತಹ ಕಾದಂಬರಿಗಳನ್ನು ರಚಿಸಿ ಮರಾಠಿಯ ಸಹೃದಯ ಓದುಗರ ಗಮನವನ್ನು ಸೆಳೆದಿದ್ದಾರೆ. ಮನದೊಳಗೆ ಮೂಡಿದ ವಿಚಾರವನ್ನು ಖಚಿತವಾಗಿ ಮಾಡಿ ತೋರಿಸುವ, ಯಾರ ಎದುರಿಗೂ ಕೈ ಒಡ್ಡದೆ, ಯಾರಿಗೂ ತಲೆಬಾಗದೆ, ಮಣಿಯದೆ ಛಲದಿಂದ ತನ್ನ ಹಾದಿಯನ್ನು ತಾನೇ ರೂಪಿಸಿಕೊಂಡ, ಭೂಮಿಯ ಧಾರಣಶಕ್ತಿಯನ್ನೂ ಸಹನೆಯ ಗುಣವನ್ನೂ ಪಡೆದ ಮೈಥಿಲಿಯು ತನ್ನ ಸ್ವಂತ ಆಸ್ಮಿತೆ ಗಾಗಿ, ಅಸ್ತಿತ್ವಕ್ಕಾಗಿ ನಡೆಸಿದ ಹೋರಾಟ ಅನನ್ಯ ಮತ್ತು ಅವಿಸ್ಮರಣೀಯ. ಇದೇ ಈ 'ಭೂಮಿ' ಕಾದಂಬರಿಯ ವಿಶೇಷತೆ. ಚಂದ್ರಕಾಂತ ಪೋಕಳೆಯವರು ಕನ್ನಡದ ಪ್ರಸಿದ್ಧ ಭಾಷಾಂತರಕಾರರಲ್ಲಿ ಒಬ್ಬರು. ಕನ್ನಡ ಮರಾಠಿಯ ಸೇತುವೆಯಾಗಿ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅವರು ಈವರೆಗೆ ತೊಂಬತ್ತು ಮರಾಠಿ ಕೃತಿಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ. ಅವರು ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿ ಮತ್ತು ಕೇಂದ್ರ ಸಾಹಿತ್ಯ ಅಕಾದೆಮಿಯ ಅನುವಾದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ 'ಭೂಮಿ' ಕಾದಂಬರಿಯನ್ನು ಕನ್ನಡದ್ದೇ ಕೃತಿ ಎಂಬಂತೆ ಅನುವಾದಿಸಿದ್ದಾರೆ.
Konncigeya sahasa
- Author Name:
Anupama K Benachinamardi
- Book Type:

- Description:
ಮಕ್ಕಳ ತಲೆಗೆ ಹಾಕುವ ಟೋಪಿ, ಕೊಂಚಿಗೆಯು ಒಂದು ದಿನ ಗಾಳಿಯಲ್ಲಿ ಹಾರಿ ಹೋಯಿತು. ಹಾಗೆ ಹಾರಿ ಹೋದಾಗ ಏನೇನು ಸಾಹಸ ಮಾಡಿತು? ಎಂಬುದನ್ನು ಕಥೆ ಹೇಳುತ್ತದೆ.
Draupadi
- Author Name:
Yarlagadda Lakshmi Prasad +1
- Book Type:

- Description:
ಮೂಲತಃ ತೆಲುಗಿನಲ್ಲಿ ಬರೆದ ದ್ರೌಪದಿ ಪುಸ್ತಕವಾಗಿ ಪ್ರಕಟವಾಗುವ ಮೊದಲು ಆಂಧ್ರ ಜ್ಯೋತಿಯಲ್ಲಿ ಧಾರಾವಾಹಿಯಾಗಿ ಪ್ರಕಟವಾಯಿತು. ವಿಶಿಷ್ಟ ಶೈಲಿಯಲ್ಲಿ ಪ್ರಸ್ತುತಪಡಿಸಲಾದ ಈ ಕಾದಂಬರಿಯು ದ್ರೌಪದಿಯನ್ನು ಒಳಗೊಂಡ ವಿವಿಧ ಘಟನೆಗಳ ವಿವರಣೆಯಲ್ಲ, ಆದರೆ ಈ ಘಟನೆಗಳನ್ನು ಒಂದು ಆಕರ್ಷಕ ಕಥೆಯಾಗಿ ಹೆಣೆಯಲಾಗಿದೆ. ಲಕ್ಷ್ಮೀಪ್ರಸಾದ್ ಬಳಸಿದ ನಿರೂಪಣಾ ಶೈಲಿ ಮತ್ತು ವಿವರಣೆಯ ರಚನಾತ್ಮಕ ವಿಧಾನವು ಓದುಗರನ್ನು ಸಂಪೂರ್ಣವಾಗಿ ತೊಡಗಿಸುತ್ತದೆ.
Customer Reviews
Be the first to write a review...
3 out of 5
Book