agedashtu nakshatra
Publisher:
Chanda Pustaka
Language:
Kannada
Pages:
177
Country of Origin:
India
Age Range:
18-100
Average Reading Time
354 mins
Book Description
ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್‌ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.