Rushyashrunga
Publisher:
Chanda Pustaka
Language:
Kannada
Pages:
122
Country of Origin:
India
Age Range:
18-100
Average Reading Time
244 mins
Book Description
ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.