shop-banner

Chanda Pustaka

Nanna Tangi Eeda

  • Author Name:

    Harsha Raghuram +1

  • Book Type:
  • Description: ಟಿಲ್ಡಾಳದು ಕಟ್ಟು ನಿಟ್ಟಿ ನ ದಿನಚರಿ. ಮಾಸ್ಟರ್ ಪದವಿಯ ಓದು, ಸೂಪರ್ ಮಾರ್ಕೆ ಟ್ ನಲ್ಲಿ ಕೆಲಸ ಮತ್ತು ಅವಳ ಪುಟ್ಟ ತಂಗಿ ಈಡಾಳನ್ನು ಹಾಗೂ ಒಮ್ಮೊ ಮ್ಮೆ ಅವಳ ಮದ್ಯವ್ಯಸನಿ ತಾಯಿಯನ್ನೂ ನೋ ಡಿಕೊ ಳ್ಳುವುದರ ನಡುವೆ ಅವಳಿಗಾಗಿ ಸಮಯ ಸಿಗುವುದೇ ಕಡಿಮೆ. ಅವರ ಮನೆಯಲ್ಲಿ ತಂದೆ ಎನ್ನಿಸಿಕೊ ಂಡ ವ್ಯಕ್ತಿ ಇಲ್ಲ. ಈ ಮೂವರ ವಾಸ ಜರ್ಮ ನಿಯ ಸಣ್ಣದೊ ಂದು ಊರಿನ ‘ಖುಷಿಯ ರಸ್ತೆ’ಯಲ್ಲಿ. ಟಿಲ್ಡಾಳಿಗೆ ಆ ಊರಿನ ಜೀ ವನ ರೇ ಜಿಗೆ ಹುಟ್ಟಿ ಸುತ್ತಿದೆ. ಅವಳ ಗೆಳೆಯ ಗೆಳತಿಯರು ಊರು ಬಿಟ್ಟು ಆಮ್ ಸ್ಟರ್ ಡಾಮ್ ಮತ್ತು ಬರ್ಲಿ ನ್ ನಂತಹ ದೊ ಡ್ಡ ಊರುಗಳನ್ನು ಸೇ ರಿಕೊ ಂಡುಬಿಟ್ಟಿ ದ್ದಾರೆ. ಈಡಾಳಿಗೆ ಆಸರೆಯಾಗಲೆಂದು ಟಿಲ್ಡಾ ಆ ಸಣ್ಣ ಊರಿನಲ್ಲೇ ಉಳಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಹೊ ತ್ತುಕೊ ಂಡಿದ್ದಾಳೆ. ಹೀ ಗಿರುವಾಗ ಒಂದು ದಿನ ಬರ್ಲಿ ನ್ ನ ದೊ ಡ್ಡ ವಿಶ್ವವಿದ್ಯಾ ಲಯದಲ್ಲಿ ಪಿಎಚ್ ಡಿ ಮಾಡುವ ಅವಕಾಶವೊ ಂದು ಟಿಲ್ಡಾಳನ್ನು ಅರಸಿ ಬರುತ್ತದೆ. ಅವಳು ತನ್ನ ಸಣ್ಣ ಊರಿನ ಜೀ ವನದಿಂದ ಬಿಡುಗಡೆ ಹೊ ಂದುವ ಕನಸನ್ನು ಕಾಣತೊ ಡಗುತ್ತಾಳೆ. ಇದ್ದಕ್ಕಿ ದ್ದಂತೆ ಯುವಕ ವಿಕ್ಟ ೋರ್ ಊರಿಗೆ ಮರಳುತ್ತಾನೆ. ವಿಕ್ಟ ೋರ್ ನ ತಮ್ಮ ಈವಾನ್ ಟಿಲ್ಡಾಳ ಗೆಳೆಯನಾಗಿದ್ದ. ಟಿಲ್ಡಾಳಂತೆ ವಿಕ್ಟ ೋರ್ ಕೂಡ ಹೊ ರಾಂಗಣ ಈಜುಕೊ ಳದಲ್ಲಿ 22 ಸುತ್ತುಗಳನ್ನು ಈಜುತ್ತಾನೆ. ಜೀ ವನದಲ್ಲಿ ಎಲ್ಲವೂ ಸರಿ ಹೋ ಗುತ್ತಿದೆ ಎಂಬ ಭಾವನೆ ಟಿಲ್ಡಾಳಿಗೆ ಬರುತ್ತಿದ್ದಂತೆಯೇ ಮನೆಯ ಪರಿಸ್ಥಿತಿ ಕೈ ಮೀ ರಿ ಹೋ ಗುತ್ತದೆ. ‘ನನ್ನ ತಂಗಿ ಈಡಾ’ ಕಾದಂಬರಿಯಲ್ಲಿ ಜರ್ಮ ನಿಯ ಸಣ್ಣ ಊರಿನ ಕೌಟುಂಬಿಕ ತಲ್ಲಣಗಳ ಗಾಢ ಚಿತ್ರಣವಿದೆ. ಇಲ್ಲಿ ಜವಾಬ್ದಾರಿ ಮತ್ತು ಸ್ವಾ ತಂತ್ರ್ಯಗಳ ನಡುವೆ ಖುಷಿಯನ್ನು ಕಂಡುಕೊ ಳ್ಳುವ ತುಡಿತವಿದೆ.
Nanna Tangi Eeda

Nanna Tangi Eeda

Harsha Raghuram

260

₹ 221

Sattavara Sollu

  • Author Name:

    Ashutosh Bhardwaj +1

  • Book Type:
  • Description: “ಸ್ತುವರ ಸ್ಲಟಲುೆ”್‌ಇದು ಪ್ತರಕ್ತೆ ಮತುು ಕ್ತಲಗಾರರಾದ ಆಶುತಲಟೋಷ್ ಭ್ಾರದ್ಾಾಜ್‌ರ “ಮೃತುಾ ಕ್ಥಾ”್‌ಎೆಂಬ ಹಿೆಂದಿ ಕ್ೃತ್ತಯ ನಲೋರ ಕ್ನಾಡ ಅನುವಾದ. ಮಾವೋವಾದಿಗಳು ಮತುು ಭ್ಾರತ್ತೋಯ ಪ್ರಭುತಾದ ಮಧ್ಲಾ ನಡಲಯುತ್ತುರುವ ಸ್ೆಂಘಷ್ೆ ಮತುು ಇದರ ನಡುವಲ ಸಿಕ್ತಕಹಾಕ್ತಕಲಟೆಂಡಿರುವ ಆದಿವಾಸಿಗಳ ಬವರ್ಲಯ ಕ್ುರಿತು ಆಶುತಲಟೋಷ್ ಭ್ಾರದ್ಾಾಜ ಕ್ಳಲದ ಒೆಂದು ದಶಕ್ದಿೆಂದಲಟ ಬರಲಯುತಾು ಬೆಂದಿದ್ಾಾರಲ. ಹಲವಾರು ಧ್ವನಿ-ಧ್ಾಟಗಳಲ್ಲೆ ದೆಂಡಕಾರಣ್ಾದ ಸ್ೆಂಕ್ತೋಣ್ೆ ಮತುು ರಕ್ುಸಿಕ್ು ಆತಮವೃತಾುೆಂತವನುಾ ನಿರಟಪಿಸ್ಲು ಹಲಟರಡುವ ಈ ಕ್ೃತ್ತಯಲ್ಲೆ, ಒಬಬ ಪ್ತರಕ್ತೆನ ಶಿಸಿುನ ವರದಿಗಾರಿಕಲ, ಡಲೈರಿಯ ಆತ್ತೀಯತಲ, ಅೆಂಕ್ತಅೆಂಶಗಳ ವಸ್ುುನಿಷ್ಠತಲ ಮತುು ಕ್ತಲಗಾರಿಕಲಯ ಕ್ಲ್ಲ, ಇವಲಲೆವೂ ಸ್ಮಪಾಕ್ದಲ್ಲೆ ಬಲರಲತ್ತವಲ. ದ್ಲೋಶದ ಶಲರೋಷ್ಠ ಲ್ಲೋಖಕ್ರು ಮತುು ವಿಮಶೆಕ್ರ ಮೆಚ್ುುಗಲಗಲ ಪಾತರವಾಗರುವ ಈ ಕ್ೃತ್ತಗಲ ಹಲವಾರು ಪ್ರಶಸಿುಗಳು ಸ್ೆಂದಿವಲ. ಈ ಕ್ೃತ್ತ ಅನಲೋಕ್ ಭ್ಾರತ್ತೋಯ ಭ್ಾಷಲಗಳಿಗಲ ಅನುವಾದಗಲಟೆಂಡಿದ್ಲ.
Sattavara Sollu

Sattavara Sollu

Ashutosh Bhardwaj

380

₹ 323

kothigalu

  • Author Name:

    Vasudhendra

  • Book Type:
  • Description: ವಸುಧೇಂದ್ರರ ಆರಂಭದ ಸುಲಲಿತ ಪ್ರಬಂಧಗಳ ಗುಚ್ಛ.
kothigalu

kothigalu

Vasudhendra

120

₹ 102

Aidu Paise VaradakshiNe

  • Author Name:

    Vasudhendra

  • Book Type:
  • Description: ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’. ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ. ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
Aidu Paise VaradakshiNe

Aidu Paise VaradakshiNe

Vasudhendra

240

₹ 204

Everest

  • Author Name:

    Jon Krakauers +1

  • Book Type:
  • Description: ಜಾನ್ ಕ್ರಾಕೌರ್ ಅಮೇರಿಕಾದ ಜನಪ್ರಿಯ ಲೇಖಕ ಮತ್ತು ಪರ್ವತರೋಹಿ. ಈತನ ಕೃತಿಯನ್ನು ಕನ್ನಡಕ್ಕೆ ತಂದವರು ವಸುಧೇಂದ್ರ. ’ಎವರೆಸ್ಟ್’ ಕೃತಿಯು ಪರ್ವತಾರೋಹಣದ ದುರಂತ ಕತೆಯಾಗಿದೆ. ಪರ್ವತಾರೋಹಣ ಮಾಡುವಾಗ ನಡೆದ ಘಟನೆಗಳು ಲೇಖಕರ ಬದುಕಿನ ಧೈರ್ಯವನ್ನು ನಿರಂತರವಾಗಿ ಕೆಣಕಿದ ಕಥಾನಕ ಅಂಶಗಳು ಈ ಕೃತಿಯಲ್ಲಿದೆ. ಲೇಖಕರಿಗೆ ಎವರೆಸ್ಟ್ ಹತ್ತುವ ಬಯಕೆಯು ಸಂಕೀರ್ಣವಾದ ಸಂಗತಿ, ಮತ್ತು ಅಪಾಯಕಾರಿ ವಿಸ್ಮಯ, ವಿಷಯಗಳು ತಿಳಿದಿದ್ದರೂ ಎವರೆಸ್ಟ್ ಹತ್ತಲೇಬೇಕೆನಿಸಿದ ಲೇಖಕರ ತೊಳಲಾಟದ ಪರಿಯನ್ನೂ, ಕಹಿ ಸತ್ಯದ ಮುಖಗಳನ್ನು ಒಂದೆಡೆ ಕೃತಿ ತೆರೆದಿಡುತ್ತದೆ.
Everest

Everest

Jon Krakauers

420

₹ 357

Guna

  • Author Name:

    Guruprasad Kaginele

  • Book Type:
  • Description: ಸಾಂಸಾರಿಕತೆ, ಪ್ರೀತಿ, ಜಗಳ, ಶೋಷಣೆ, ಅಳು, ನಗು ಎಲ್ಲವೂ ಹಾಸುಹೊಕ್ಕಾಗಿರುವ ಸಂಬಂಧಗಳಲ್ಲಿ ಎಲ್ಲವೂ ಝರಿಯಂತೆ ಹರಿಯುತ್ತದೆ. ಗಂಡು ಹೆಣ್ಣು ಕೂಡಿ ಸಂಸಾರ ಮಾಡಿದರೂ ಶೋಷಣೆ ಕೇವಲ ಲಿಂಗಕ್ಕೆ ಸಂಬಂಧಿಸಿದ್ದಲ್ಲ. ಸಂಸಾರದಲ್ಲಿ ಗಂಡಿಗೆ ಇಂಥ ಪಾತ್ರ, ಹೆಣ್ಣಿಗೆ ಇಂಥ ಪಾತ್ರ ಎಂದು ನಿರ್ದಿಷ್ಟವಾಗಿ ಹೇಳುವ ಕಾಲ ಮುಗಿದಿದೆ . ಹಾಗಾದಾಗ, ಪ್ರೀತಿಯಷ್ಟೇ ಶೋಷಣೆಯೂ ಅಸ್ಪಷ್ಟವಾಗಿ ಜಿವಮಾನವಿಡೀ ನಡೆದಿರಬಹುದು. ಇದನ್ನು ಕೂದಲು ಸೀಳಿ ನೋಡುವುದೋ ಅಥವಾ ‘ಡೀಲ್ ವಿಥ್ ಇಟ್’ ಎಂದು ಬದುಕನ್ನು ಮ್ಯಾನೇಜ್ ಮಾಡುವುದೋ, ಎಲ್ಲದಕ್ಕೂ ಉತ್ತರ ಕುಟುಂಬವೆಂಬ ವ್ಯವಸ್ಥೆ ಮಾತ್ರವೆ? ಈ ಹುಡುಕಾಟ ಕಾದಂಬರಿಯಾಗಿದೆ.
Guna

Guna

Guruprasad Kaginele

150

₹ 127.5

Enna Bhavada Keedu

  • Author Name:

    S Surendranath

  • Book Type:
  • Description: ನಾಟಕಕಾರರೂ, ಬರಹಗಾರರೂ ಆದ ಎಸ್. ಸುರೇಂದ್ರನಾಥ್ ಅವರ ಕಾದಂಬರಿ ’ಎನ್ನ ಭವದ ಕೇಡು’. ಓದುಗರ ಜೊತೆಯಲ್ಲೇ ನಿರಂತರವಾಗಿ ಸಾಗುವ ಕಾದಂಬರಿಯ ಪಾತ್ರ, ಊರಿನ ಚಿತ್ರಣ, ಜನ, ಅವರ ತಲ್ಲಣಗಳು, ಆತಂಕಗಳು, ಹೀಗೆ ಅನೇಕ ಸಂಗತಿಗಳು ಓದುಗರ ಅನುಭವದ ಭಾಗವಾಗುತ್ತದೆ. ಕಾದಂಬರಿ ಸಾಗುತ್ತಾ ಓದುಗರ ನಡುವಿನ ಚರಿತ್ರೆಯಾದಂತೆ ಮನದಲ್ಲಿ ಬೇರೂರಿ ನಿಲ್ಲುತ್ತದೆ. ಎನ್ನ ಭವದ ಕೇಡು ಕಾದಂಬರಿಯ ಮುಖ್ಯ ಪಾತ್ರಧಾರಿ ಮಾಮಿಯ ಬದುಕಿನ ಅನಾವರಣ ಇಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪಾತ್ರದಲ್ಲಿನ ವ್ಯಕ್ತಿತ್ವ, ಮತ್ತು ಅವರ ಬದುಕಿನೊಳಗೆ ಮುಖಾಮುಖಿಗೊಳ್ಳುವ ಅನೇಕ ಸಹಜ ಬದುಕಿನ ಗೊಂದಲ, ವಿಸ್ಮಯ, ತಲ್ಲಣಗಳನ್ನು ಈ ಕಾದಂಬರಿ ತೆರೆದಿಡುತ್ತದೆ.
Enna Bhavada Keedu

Enna Bhavada Keedu

S Surendranath

75

₹ 63.75

Mohanaswamy

  • Author Name:

    Vasudhendra

  • Rating:
  • Book Type:
  • Description: ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Mohanaswamy

Mohanaswamy

Vasudhendra

270

₹ 229.5

Vishama Bhinnaraashi

  • Author Name:

    Vasudhendra

  • Book Type:
  • Description: ಪ್ರಮುಖ ಕತೆಗಾರ ವಸುಧೇಂದ್ರ ಅವರು ಬರೆದಿರುವ ಅಮೃತ ಸೊಪ್ಪು, ವಾಹಿನಿ, ಡೆವಿಲ್‌ ಡಾಗ್‌, ವಿಷಮ ಭಿನ್ನರಾಶಿ, ನಿಯಮ ಬಾಹಿರ, ಸೈಕಲ್‌ ಸವಾರಿ, ಚತುರ್ಮುಖ, ಆಡಬಾರದ ಮಾತುಗಳು ಕಾಡುವಾಗ- ಹೀಗೆ ಎಂಟು ಕಥೆಗಳನ್ನು ಈ ಕೃತಿಯು ಒಳಗೊಂಡಿದೆ. ತಂದೆ ತಾಯಿ, ಸಂಸ್ಕಾರವನ್ನೂ ಮರೆತು ತಂತ್ರಜ್ಞಾನ ಜಗತ್ತಿನಲ್ಲಿ ಹುದ್ದೆಯಲ್ಲಿ ಮೇಲೇರಲು ಹಪಾಹಪಿಸುವ ಯುವ ಜನಾಂಗವನ್ನು ಈ ಕೃತಿಯಲ್ಲಿ ಹಿಡಿದಿಟ್ಟಿದ್ದಾರೆ.
Vishama Bhinnaraashi

Vishama Bhinnaraashi

Vasudhendra

280

₹ 238

Priyee Chaarusheele

  • Author Name:

    Nagaraja Vastarey

  • Book Type:
  • Description: ಐಳ ಮತ್ತು ಮಾತಂಗಿ ಎನ್ನುವ ಒಂದು ಯುವ ಜೋಡಿ, ಪುರಿಯ ಜಗನ್ನಾಥ ಮಂದಿರದ ಸುತ್ತಲೂ ಒಂದು ಸಂಜೆ ಕಳೆಯುವ ಈ ಅಪರೂಪದ ಪ್ರೇಮಕಥನವು, ಕನ್ನಡಕ್ಕೆ ಹೊಸದೇ ಒಂದು ಬಗೆಯ ಕಾದಂಬರಿಯ ಜಗತ್ತನ್ನು ತೆರೆದು ಕೊಟ್ಟಿದೆ. ನಾಗರಾಜ ವಸ್ತಾರೆಯವರ ಅಪರೂಪದ ಕಾವ್ಯಮಯ ಭಾಷೆಯು ಈ ಕಾದಂಬರಿಯ ಉದ್ದಕ್ಕೂ ವಿಶೇಷ ಮೆರುಗನ್ನು ನೀಡಿದೆ.
Priyee Chaarusheele

Priyee Chaarusheele

Nagaraja Vastarey

380

₹ 323

Nammamma Andre Nangishta

  • Author Name:

    Vasudhendra

  • Book Type:
  • Description: ಕಥೆಗಾರ, ಬರಹಗಾರ ವಸುಧೇಂದ್ರ ಅವರು ಬರೆದ ‘ನಮ್ಮಮ್ಮ ಅಂದ್ರೆ ನಂಗಿಷ್ಟ’ ಕೃತಿ 2006ರಲ್ಲಿ ಮೊದಲ ಮುದ್ರಣಗೊಂಡು 2019ರಲ್ಲಿ ಹತ್ತೊಂಬತ್ತನೇ ಆವೃತ್ತಿ ಕಂಡಿದೆ. ಸರಳ ಪ್ರಬಂಧ ಸಂಕಲನಗಳಲ್ಲಿ ಲೇಖಕರು ತಾಯಿಯ ಮೊದಲ ಕೂಗಿನಿಂದ ನಡೆದ ಹೃದಯಸ್ಪರ್ಶಿ ಘಟನೆಗಳನ್ನು ವಿವರಿಸಿದ್ದಾರೆ. ಹುಟ್ಟಿದ ಕ್ಷಣದಿಂದ ಮಗು ತಾಯಿಯನ್ನು ಅಳಿಸುವಷ್ಟು ದೊಡ್ಡದಾದ ಸಮಯಕ್ಕೆ. ಪ್ಯಾಂಟಿನಲ್ಲಿ 'ಗಲೀಜು' ಮಾಡಿ ಎಲ್ಲರಿಗೂ ಅಸ್ಪೃಶ್ಯಳಾಗುವಂತೆ ಮಾಡುವ ತಾಯಿ, ಬಂಗಾರದಂತಹ ಸ್ಟೀಲ್ ಪಾತ್ರೆಗಳನ್ನು ಪ್ರೀತಿಸುವ ತಾಯಿ, ಭಿಕ್ಷುಕ ಮಗನ ಮುಂದೆ ಕುಳಿತು "ನೀನು ನಂಗೆ ಬೈದುಬಿಟ್ಟಿ" ಎಂದು ಮುಗ್ಧವಾಗಿ ಅಳುವ ತಾಯಿ. ಬೆಂಗಳೂರಿನ ಅಜ್ಞಾತ ಬೀದಿಯಲ್ಲಿ ಕಳೆದುಹೋಗುತ್ತಾಳೆ, ಶೌಚಕ್ಕೆ ಹೋದಷ್ಟೇ ಸಲೀಸಾಗಿ ಇಹಲೋಕ ತ್ಯಜಿಸುವ ತಾಯಿ, ತನಗೆ ಗೊತ್ತಿರದ ಉತ್ಕಟ ಪ್ರೀತಿ ಹೊಂದಿರುವ ತಾಯಿ. ಓದುಗನ ಭಾವುಕ ಜಗತ್ತಿಗೆ ನವಿರಾಗಿ ತಿಳಿಸುವ ಲೇಖಕರ ಈ ಕೃತಿ ಹಲವು ಬಗೆಯ ತಾಯಂದಿರ ಮನಸುಗಳನ್ನು ತಿಳಿಸುತ್ತದೆ. ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ
Nammamma Andre Nangishta

Nammamma Andre Nangishta

Vasudhendra

100

₹ 85

Yugaadi

  • Author Name:

    Vasudhendra

  • Book Type:
  • Description: ವಸುಧೇಂದ್ರರ ಈ ಕಥಾಸಂಕಲನಕ್ಕೆ ಹಲವು ಪ್ರಶಸ್ತಿಗಳು ಸಂದಿವೆ. ಮುಖ್ಯವಾಗಿ ಡಾ. ಯು ಆರ್ ಅನಂತಮೂರ್ತಿ ಪ್ರಶಸ್ತಿ ಹಾಗೂ ವರ್ಧಮಾನ ಉದಯೋನ್ಮುಖ ಪ್ರಶಸ್ತಿಗಳು ಈ ಸಂಕಲನಕ್ಕೆ ದಕ್ಕಿವೆ.
Yugaadi

Yugaadi

Vasudhendra

190

₹ 161.5

agedashtu nakshatra

  • Author Name:

    Sumangala

  • Book Type:
  • Description: ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ. ಪತ್ನಿ ತೀರಿದ ಬಳಿಕ ಪ್ರೊಫೆಸರ್‌ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ. ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್‌ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
agedashtu nakshatra

agedashtu nakshatra

Sumangala

230

₹ 195.5

Daari

  • Author Name:

    Kusuma Ayrahalli

  • Book Type:
  • Description: "ದಾರಿ" ಇದು ಕುಸುಮಾ ಆಯರಹಳ್ಳಿ ಬರೆದ ಕಾದಂಬರಿಯ ಶೀರ್ಷಿಕೆ. ಈ ಪುಸ್ತಕದಲ್ಲಿ, ಹಳ್ಳಿಯಿಂದ ನಗರಕ್ಕೆ ಹೋಗಿ ಬದುಕುತ್ತಿದ್ದ ವ್ಯಕ್ತಿಯೊಬ್ಬ, ತನ್ನ ಹಳ್ಳಿಗೆ ಮತ್ತೆ ಮರಳಿ, ಆ ಹಳ್ಳಿಗಾಗಿ ದುಡಿಯುವ, ಹಳ್ಳಿಗರಿಗಾಗಿ ತುಡಿಯುವ ಕಥೆ ಇದು. ಕಥಾ ನಾಯಕನ ಔದ್ಯೋಗಿಕ ಜೀವನದಲ್ಲಾದ ಸಣ್ಣ ಪಲ್ಲಟ ತನ್ನ ಹಳ್ಳಿಯನ್ನು ಆತನಿಗೆ ಮತ್ತೆ ನೆನಪಿಸುತ್ತದೆ. ತನ್ನದೇ ಆದ ಆದರ್ಶಗಳ ಜತೆ ಬದುಕುತ್ತಿರುವ ಕಥಾ ನಾಯಕನಿಗೆ ತಾನು ಹುಟ್ಟಿ ಬೆಳೆದ ಹಳ್ಳಿಯಲ್ಲಿ ‌ಎಲ್ಲವೂ ಸರಿಯಿಲ್ಲ ಎಂದೆನಿಸಲು ಆರಂಭವಾಗುತ್ತದೆ. ಸರಿಯಿಲ್ಲದ್ದನ್ನು ಸರಿಪಡಿಸುವ ನಿರ್ಧಾರ ಮಾಡುತ್ತಾನೆ. ಅಲ್ಲಿಂದಲೇ ಈ "ದಾರಿ"ಯ ಆರಂಭ.
Daari

Daari

Kusuma Ayrahalli

395

₹ 335.75

Anthu

  • Author Name:

    Prakash Nayak

  • Book Type:
  • Description: ‘ಅಂತು’ ಎಂಬ ಶಬ್ದದ ಎಲ್ಲ ಸಾಧ್ಯತೆಗಳನ್ನೂ ಅರ್ಥಪೂರ್ಣವಾಗಿ ಧ್ವನಿಸುವ ಈ ಕಾದಂಬರಿಯು, ತನ್ನ ವಸ್ತು ಮತ್ತು ಕಥನತಂತ್ರ ಎರಡೂ ದೃಷ್ಟಿಗಳಿಂದ ಕನ್ನಡ ಕಾದಂಬರಿಲೋಕಕ್ಕೆ ಒಂದು ವಿಶಿಷ್ಟ, ಮೌಲಿಕ ಸೇರ್ಪಡೆ. ಸದ್ಯದ ಅತ್ಯಾಧುನಿಕವಾದ ಕಾಪೆರ್Çರೇಟ್ ಜಗತ್ತಿನ ರೋಚಕ ವಿದ್ಯಮಾನಗಳನ್ನು ಲವಲವಿಕೆಯಿಂದ ನಿರೂಪಿಸುತ್ತಲೇ, ಅವುಗಳನ್ನೂ ಮೀರಿದ ನಿತ್ಯಸತ್ಯಗಳನ್ನು ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆ ಇಲ್ಲಿ ಕಂಡುಬರುತ್ತದೆ. ಒಂದು ಕುತೂಹಲಕಾರೀ ಪ್ರಾಜೆಕ್ಟಿನ ಪೂರ್ವಾಪರಗಳನ್ನು ಪತ್ತೇದಾರೀ ಶೈಲಿಯಲ್ಲಿ ಶೋಧಿಸುವಂತೆ ಆರಂಭವಾಗುವ ಈ ಬರಹವು ಕ್ರಮೇಣ ಹುಟ್ಟು-ಸಾವು-ಪುನರ್ಜನ್ಮಗಳಂಥ ಗಂಭೀರ ಪ್ರಶ್ನೆಗಳಿಗೆ ಎದುರಾಗಿ ತಾತ್ವಿಕ ಎತ್ತರಗಳಿಗೆ ಬೆಳೆಯುವ ಪರಿ ಗಮನಾರ್ಹವಾಗಿದೆ. ಕನ್ನಡನಾಡಿನಿಂದ ಬಹುದೂರದ ಅಮೆರಿಕಾದಲ್ಲಿ, ತೀರಾ ಭಿನ್ನವಾದ ಪಾತ್ರ-ಭಾಷೆ-ಔದ್ಯಮಿಕ ಪರಿಸರದಲ್ಲಿ ಸೃಷ್ಟಿಯಾಗುವ ಅನುಭವವನ್ನು ಕನ್ನಡ ಭಾಷೆಯಲ್ಲಿ ಒಳಗೊಳ್ಳುವ ಈ ಸೃಜನಶೀಲ ಪ್ರಯೋಗವು ಕನ್ನಡ ಸಾಹಿತ್ಯವು ಹಿಗ್ಗುತ್ತಿರುವ ಬಗೆಯನ್ನೂ ಕಾಣಿಸುತ್ತ ಆಸಕ್ತಿ ಹುಟ್ಟಿಸುತ್ತದೆ. ತನ್ನ ಸ್ಮೃತಿಗಳಲ್ಲಿ ಜತನದಿಂದ ಕಾಪಿಟ್ಟುಕೊಂಡಿರುವ ಸ್ಥಳೀಯ ತಿಳಿವಳಿಕೆಯನ್ನು ಆಧುನಿಕ ಲೋಕಕ್ಕೆ ಮುಖಾಮುಖಿಯಾಗಿಸಿ ಕಥನ ಪ್ರಕ್ರಿಯೆಯನ್ನು ಸತ್ಯದ ಶೋಧವಾಗಿ ವಿಸ್ತರಿಸುವ ಪ್ರಯತ್ನದಲ್ಲಿ ಪ್ರಕಾಶ್ ನಾಯಕರು ಸಾಕಷ್ಟು ಯಶಸ್ವಿಯಾಗಿದ್ದಾರೆ. ‘ಅಂತು’ ನಿಸ್ಸಂದೇಹವಾಗಿ ಈ ದಶಕದ ಮುಖ್ಯ ಕನ್ನಡ ಕಾದಂಬರಿಗಳ ಸಾಲಿನಲ್ಲಿ ನಿಲ್ಲುವಂಥದ್ದು.
Anthu

Anthu

Prakash Nayak

200

₹ 170

Chukki Belakina Jaadu

  • Author Name:

    Karki Krishnamurthy

  • Book Type:
  • Description: ಅಪರಿಚಿತವಾದುದನ್ನು ನನ್ನದೇಅನುಭವಎಂಬಂತೆಅನುಭವಕ್ಕೆತಂದುಕೊಡುವುದೇಕಲೆಯ ಶಕ್ತಿ. ಕರ್ಕಿಕೃಷ್ಣಮೂರ್ತಿಯವರ ಚುಕ್ಕಿ ಬೆಳಕಿನ ಜಾಡು ಈ ಶಕ್ತಿಯನ್ನು ಬೆನ್ನತ್ತಿ ಹೊರಟಿದೆ. ಸಮಕಾಲೀನ ಜಗತ್ತಿನ ಸನ್ನಿವೇಶಗಳು ಬದುಕಿನಅಸಂಗತತೆಯನ್ನುಇನ್ನೂದಟ್ಟವಾಗಿಸುತ್ತಿರುವ ವಾಸ್ತವದ ಶೋಧವಾಗಿಯೂಇದುಕಾಣಿಸುತ್ತದೆ. ಆಮಿಷಗಳನ್ನು ಬದುಕುಒಡ್ಡುತ್ತದೋ ನಾವೇ ಸೃಷ್ಟಿಸಿಕೊಳ್ಳುವುದೋ ಎನ್ನುವ ಬಗೆಹರಿಯದದ್ವಂದ್ವ , ಮಹತ್ವಾಕಾಂಕ್ಷೆ, ಕನಸು, ದುರಾಸೆ, ಸ್ವಾರ್ಥ, ಸಣ್ಣತನಗಳ ಸಹಜಅಸಹಜ ನೆಲೆಗಳ ಸಂಘರ್ಷ ಈ ಕೃತಿಯನ್ನು ರೂಪಿಸಿದೆ. ಗುಟ್ಟೇ ಬಿಟ್ಟುಕೊಡದ ಬದುಕನ್ನು, ಅದು ನಿನಗೆ ಬೇಡಎಂದದ್ದನ್ನು ಕಿತ್ತುಕೊಳ್ಳಲು ಹಪಹಪಿಸುವ ಮನುಷ್ಯಾವಸ್ಥೆಯನ್ನುತುಸುಆತಂಕದಿಂದಲೇ ಈ ಕೃತಿಎದುರಾಗುತ್ತದೆ. ಕಾದಂಬರಿಯ ನಾಯಕ ನಿರಂಜನನ ಪಾತ್ರಕ್ಕೆ ಸಾಧಾರಣೀಕರಣದಗುಣ ಮತ್ತು ಸ್ವರೂಪಎರಡೂದಕ್ಕಿದೆ. ಎಲ್ಲ ಹುಲುಮಾನವರ ಒಳಗೂ ಇದ್ದೇಇರುವಕ್ಷುದ್ರ ಸಂಗತಿಗಳನ್ನು ಆತ್ಮವಂಚನೆಯಲ್ಲಿ ನಿಭಾಯಿಸುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿರುತ್ತವೆ. ನಿರಂಜನಇನ್ನೂಒಂದು ಹೆಜ್ಜೆ ಮುಂದೆ ಹೋಗಿ ಅದನ್ನುಎಗ್ಗಿಲ್ಲದೆ ಸಮರ್ಥಿಸಿಕೊಳ್ಳುತ್ತಾ ಹೋಗುತ್ತಾನೆ. ತನಗೆ ಬೇಕಾದ್ದನ್ನು ಪಡೆದುಕೊಳ್ಳಲು ಯಾವದಾರಿ ಹಿಡಿದರೂತಪ್ಪಿಲ್ಲಎಂದು ಮತ್ತೆ ಮತ್ತೆಯೋಚಿಸುವುದೇ, ತನಗೆತಾನೇ ನಂಬಿಸಿಕೊಳ್ಳಲು ಹೋಗುವುದೇ ಅವನೊಳಗಿನ ಸಾಕ್ಷಿ ಪ್ರಜ್ಞೆಯನ್ನುಧ್ವನಿಸುತ್ತದೆ. ನೈತಿಕಅನೈತಿಕತೆಯ ಪ್ರಶ್ನೆಗಳನ್ನು ನಿರಂಜನ ಸುಪ್ತಪ್ರಜ್ಞೆಯಲ್ಲಿ ಮುಖಾಮುಖಿಯಾಗುತ್ತಾನೆ. ಹೀಗಿದ್ದೂ ಬದುಕಿನೊಳಗೆ ಬಾಳಬಹುದಾದ ಬೆಳಕಿನ ಜಾಡನ್ನು ಹುಡುಕುವಗುಪ್ತಗಾಮಿನಿಯೂ ನಮ್ಮೊಳಗೇ ಇರುವ ಸೂಚನೆಯೂಇಲ್ಲಿದೆ.
Chukki Belakina Jaadu

Chukki Belakina Jaadu

Karki Krishnamurthy

200

₹ 170

Tejo Tungabhadra

  • Author Name:

    Vasudhendra

  • Rating:
  • Book Type:
  • Description: 15-16 ನೆಯ ಶತಮಾಮನದ ಲಿಸ್ಬನ್, ವಿಜಯನಗರ ಮತ್ತು ಗೋವಾ ನಗರಗಳ ಸಾಮಾಜಿಕ ಮತ್ತು ರಾಜಕೀಯ ಜೀವನವನ್ನು ಆಧರಿಸಿ ಬರೆದ ಜನಸಾಮಾನ್ಯರ ಕಾದಂಬರಿ. ನಿಮ್ಮ ಹೊಸ ಕಾದಂಬರಿಯನ್ನು ಓದಿ ಮೂಕ ವಿಸ್ಮಿತನಾಗಿದ್ದೇನೆ. ಇಂತಹ ಶ್ರೇಷ್ಠ ಕೃತಿಯನ್ನು ಕನ್ನಡಿಗರಿಗೆ ಕೊಟ್ಟಿರುವ ನಿಮಗೆ ಹಾರ್ದಿಕ ಅಭಿನಂದನೆಗಳು. – ಡಾ. ಸಿ ಎನ್ ರಾಮಚಂದ್ರನ್
Tejo Tungabhadra

Tejo Tungabhadra

Vasudhendra

450

₹ 382.5

Taarabhaayiya Patra

  • Author Name:

    M R Dattathri

  • Book Type:
  • Description: ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Taarabhaayiya Patra

Taarabhaayiya Patra

M R Dattathri

130

₹ 110.5

Hampi Express

  • Author Name:

    Vasudhendra

  • Book Type:
  • Description: ಹಂಪಿ ಎಕ್ಸ್‌ಪ್ರೆಸ್ (ಕನ್ನಡ)-ವಸುಧೇಂದ್ರ ಅವರ ಕನ್ನಡದಲ್ಲಿ ಸಣ್ಣ ಕಥೆಗಳ ಸಂಗ್ರಹವನ್ನು ಚಂದಾ ಪುಸ್ತಕದಿಂದ ಪ್ರಕಟಿಸಲಾಗಿದೆ. ಈ ಕೃತಿಯಲ್ಲಿ ವಾಸ್ತವಕ್ಕೆ ಹತ್ತಿರವಾದ ಮತ್ತು ಸಮಕಾಲೀನ ತಲ್ಲಣಗಳನ್ನು ಎದುರಿಸುವ ಹಲವು ವಿಷಯಗಳನ್ನು ಕಥೆಗಾರ ವಸುಧೇಂದ್ರ ಓದುಗರಿಗೆ ನೀಡಿದ್ದಾರೆ. ಈ ಕೃತಿಗೆ ಮಾಸ್ತಿ ಕಥಾ ಪ್ರಶಸ್ತಿ, ಬೇಂದ್ರೆ ಪುಸ್ತಕ ಬಹುಮಾನ ಮತ್ತು ವಾಸುದೇವ ಭೂಪಾಲಂ ಪ್ರಶಸ್ತಿ ಲಭಿಸಿದೆ.
Hampi Express

Hampi Express

Vasudhendra

195

₹ 165.75

Harichitta Satya

  • Author Name:

    Vasudhendra

  • Book Type:
  • Description: ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Harichitta Satya

Harichitta Satya

Vasudhendra

140

₹ 119

Offers

Best Deal

Lorem ipsum dolor sit amet, consectetur adipiscing elit, sed do eiusmod tempor incididunt ut labore et dolore magna aliqua

Lorem ipsum dolor sit amet, consectetur adipiscing elit, sed do eiusmod tempor incididunt ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat.

whatsapp